ಬೆಂಗಳೂರು:- ಆ.9 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಜಕ್ಕೂ ಆ ಕಳಂಕಿತ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್!
ಕಳೆದ ಎರಡು ದಿನಗಳಿಂದ ಹಿಂಗಾರು ಮಳೆ ಶುರುವಾಗಿದ್ದು, ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮಂಡ್ಯ, ರಾಮನಗರ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಗುರುವಾರ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ನಗರದ ಅನೇಕ ಕಡೆ ವರುಣ ತಂಪೆರೆದಿದ್ದಾನೆ. ಗೊರಗುಂಟೆಪಾಳ್ಯ, ಜಾಲಹಳ್ಳಿ, ವಿದ್ಯಾರಣ್ಯಪುರ, ಹೆಬ್ಬಾಳ, ಯಲಹಂಕ, ಪೀಣ್ಯ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ದಾಸರಹಳ್ಳಿ, ಮಲ್ಲೇಶ್ವರಂ, ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ.