ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಾಲೇಜು ವಿದ್ಯಾರ್ಥಿ ನಾಪತ್ತೆ: ಮಗನಿಗಾಗಿ ಬೀದಿ-ಬೀದಿ ಸುತ್ತಾಡಿದ ತಾಯಿ!
ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಬೀಳಲಿದೆ. ಇನ್ನುಳಿದಂತೆ ಯಾವುದೇ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ತಾರೀಕು ಮೋಡ ಕವಿ ವಾತಾವರಣ ಇರಲಿದೆ. ಬಳಿಕ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಬೆಂಗಳೂರಿಗರು ಮನೆಯಿಂದ ಹೊರ ಬರೋ ಮುನ್ನ ಎಚ್ಚರ ವಹಿಸಬೇಕು.