ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 27ರ ವರೆಗೆ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಂಬೆ ಹಣ್ಣಿನ ಪೀಸ್ಗಳನ್ನು ರಾತ್ರಿ ದಿಂಬಿನಡಿ ಇಟ್ಟುಕೊಂಡ್ರೆ ಬೆಳಗಾಗುವಷ್ಟರಲ್ಲಿ ಮ್ಯಾಜಿಕ್ ಆಗುತ್ತೆ!
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಉಳಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.