ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದ್ದು, ಬಿಸಿಲಿರಲಿದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.