ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.15 ರಿಂದ 16 ರವರೆಗೆ ರಾಜ್ಯದಲ್ಲಿ ಒಣ ಹವೆ ಇರಲಿದ್ದು, ಡಿ.17 ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.17 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿ.19, 19 ಮತ್ತು 20 ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 14,15 ಹಾಗೂ 16 ಈ ಮೂರು ದಿನಗಳ ಒಣ ಹವೆಯ ಬಳಿಕ ರಾಜ್ಯದ ದಕ್ಷಿಣ ಕರ್ನಾಟಕದಲ್ಲಿ ಡಿಸೆಂಬರ್ 17 ರಿಂದ ಮತ್ತೆ ಸಾಧಾರಣ ಮಳೆಯಾಗಲಿದೆ.