ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜನವರಿ 14 ರಿಂದ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ,ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಇರಲಿದೆ.
ಎಚ್ಎಎಲ್ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.