ಬೆಂಗಳೂರು:- ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಜನರೇ ಎಚ್ಚರ: ಕೊತ್ತಂಬರಿ, ಕರಿಬೇವಿನ ಸೊಪ್ಪು ತಿನ್ನುವ ಮುನ್ನ ಹುಷಾರ್!
ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಇಂದಿನಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಇರಲಿದೆ. ಅ.4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 9ರವರೆಗೆ ಕರಾವಳಿಯ ಕೆಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ಆಗುತ್ತಿದೆ. ಇಂದು ಮಧ್ಯಾಹ್ನ ಆಗುತ್ತಿದ್ದಂತೆ ಸಿಟಿ ಮಂದಿಗೆ ವರುಣನ ದರ್ಶನವಾಗಿತ್ತು.