ಬೆಂಗಳೂರು:- ಬೆಂಗಳೂರಿನಲ್ಲಿ ಮಳೆರಾಯ ಆರ್ಭಟ ಜೋರಾಗಿರುವ ಹಿನ್ನೆಲೆ, ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿ, ಎಲ್ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕಮಿಷನರ್ ಪ್ರಕಟಿಸಿದ್ದಾರೆ.
ಕಾಲೇಜುಗಳ ಕಟ್ಟಡಗಳು ದುರ್ಬಲವಾಗಿದ್ದಲ್ಲಿ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.