ಬೆಂಗಳೂರು:- ಇಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ ಅಲ್ಲಲ್ಲಿ ಹಗುರ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಶಿವನೊಗ್ಗ, ಹಾಸನ, ಚಿಕ್ಕಮಗಳೂರಲ್ಲೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.