ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ ಮುಂದುವರಿಯಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಂಗಭದ್ರಾ ಡ್ಯಾಂನ ಕ್ರಸ್ಟ್ಗೇಟ್ ಕಟ್: ಇಂದು ಜಲಾಶಯಕ್ಕೆ ಸಂಜೆ ತಾತ್ಕಾಲಿಕ್ ಗೇಟ್ ಅಳವಡಿಗೆ!
ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ, ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.