ಬೆಂಗಳೂರು:- ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುಡ್ ನ್ಯೂಸ್: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಆದೇಶ!
ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಅಂಕೋಲಾ, ಕಾರವಾರ, ಕ್ಯಾಸಲ್ರಾಕ್, ಹೊಸದುರ್ಗದಲ್ಲಿ ಭಾರಿ ಮಳೆಯಾಗಲಿದೆ. ಹೊನ್ನಾವರ, ಮಂಕಿ, ಗಂಗಾವತಿ, ಕೂಡಲಸಂಗಮ, ಕದ್ರಾ, ಹುಣಸಗಿ, ದೇವದುರ್ಗ, ನಾರಾಯಣಪುರ, ಕಡೂರು, ಪಣಂಬೂರು, ಲಿಂಗಸುಗೂರು, ಮಾನ್ವಿ, ಭಾಗಮಂಡಲ, ಯುಗಟಿ, ಕುಕನೂರು, ಕುರ್ಡಿ, ಶಿರಾಲಿಯಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ