ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ (Telangana Campaign) ಹಣ ಸಂಗ್ರಹಿಸಲು ಕರ್ನಾಟಕದ ಜನರಿಂದ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (Kishan Reddy) ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೈದರಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿಶನ್ ರೆಡ್ಡಿ, ʻʻಕೆಸಿಆರ್ ಕೋ ಹಟಾವೋ, ತೆಲಂಗಾಣ ಕೋ ಬಚಾವೋ, ಬಿಜೆಪಿ ಕೋ ಜಿತಾವೋʼʼ ಎಂದು ಘೋಷವಾಕ್ಯ ಮೊಳಗಿಸಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಂತಹ ಹಲವು ಹಿರಿಯ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಪರ ವ್ಯಾಪಕ ಚುನಾವಣಾ ಪ್ರಚಾರ ನಡೆಸಿದ ಬಳಿಕ ಈ ಆರೋಪಗಳು ಕೇಳಿಬಂದಿವೆ.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿತು. ಆದ್ರೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸುತ್ತಿಲ್ಲ. ಕರ್ನಾಟಕದಲ್ಲಿರುವ ಪ್ರತಿಯೊಂದು ವರ್ಗದ ಜನರೂ ಕೂಡ ಕಾಂಗ್ರೆಸ್ಗೆ ವಿರುದ್ಧವಾಗಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆದೇಶದಂತೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತೆಲಂಗಾಣ, ಛತ್ತಿಸ್ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ.