ಜೈಪುರ:– ರಾಜಸ್ಥಾನಕ್ಕೆ ಬೇಕಿರುವುದು ಭ್ರಷ್ಟ ಸರ್ಕಾರವಲ್ಲ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜಸ್ಥಾನ ಜನರರಿಗೆ ಬೇಕಾಗಿರುವುದು ರಾಜ್ಯವನ್ನು ಅಭಿವೃದ್ಧಿಯತ್ತ ಕರೆದೊಯ್ಯುವ ಸರ್ಕಾರವೇ ಹೊರತು ಭ್ರಷ್ಟಾಚಾರದಿಂದ ಕೂಡಿದ ಹಾಗೂ ಕುಟುಂಬ ರಾಜಕಾರಣವಲ್ಲ ಎಂದರು.
ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದರು. ನಾರಿ ಶಕ್ತಿ ವಂದನಾ ಅಧಿನಿಯಮ’ ಎಂಬ ಹೆಸರಿನಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಮಾಡಿದಾಗಿಂದಲೂ ‘ಇಂಡಿಯಾ ಮೈತ್ರಿಕೂಟ’ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದೆ’ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.
‘ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿದ್ದರು. ಆದರೆ ನಿತೀಶ್ ಈ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇದು ಕಾಂಗ್ರೆಸ್ನ ನಿಜವಾದ ಮುಖ’. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆಂದು ಎಂದು ಮೋದಿ ಹೇಳಿದ್ದಾರೆ.