ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೂ ತುಂಬಾ ಮಹತ್ವದ್ದು.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಇನ್ನು ಪ್ಲೇಆಫ್ ರೇಸ್ನಲ್ಲಿ ಉಳಿದುಕೊಳ್ಳಬೇಕಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಡೆಲ್ಲಿ ಕ್ಯಾಪಿಟಲ್ಸ್ : ಜೇಕ್ ಫ್ರೇಸರ್-ಮೆಕ್ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ಐಪಿಎಲ್ ಪಾದಾರ್ಪಣೆ: ಗುಲ್ಬದಿನ್ ನೈಬ್.
ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಡೊನೊವನ್ ಫೆರೆರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್.
ಅಲಭ್ಯ: ಧ್ರುವ್ ಜುರೇಲ್ ಹಾಗೂ ಶಿಮ್ರಾನ್ ಹೆಟ್ಮೆಯರ್.