ಭಾರತದ ಚೆಸ್ ವಿಶ್ವ ಚಾಂಪಿಯನ್ ಗುಕೇಶ್ ಗೆ ಅಭಿನಂದನೆಯ ಸುರಿಮಳೆಯೇ ಆಗುತ್ತಿದೆ. ಗುಕೇಶ್ ಸಾಧನೆಗೆ ಹಲವು ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ಇದೀಗ ಗುಕೇಶ್ ರನ್ನು ನಟ ಸೂಪರ್ ಸ್ಟಾರ್ ರಜನಿಕಾಂತ ಹಾಗೂ ಶಿವಕಾರ್ತಿಕೇಯನ್ ಸೇರಿದಂತೆ ಹಲವು ಭೇಟಿಯಾಗಿ ವಿಶ್ ಮಾಡಿದ್ದಾರೆ. ಇಂಥ ಸೆಲೆಬ್ರಿಟಿಗಳನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದಕ್ಕಾಗಿ ಗುಕೇಶ್ ಧನ್ಯವಾದ ಅರ್ಪಿಸಿದ್ದು ಭೇಟಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಗುಕೇಶ್ ಮೂಲಕ ಭಾರತಕ್ಕೆ 11 ವರ್ಷಗಳ ಬಳಿಕ ಚೆಸ್ ಚಾಂಪಿಯನ್ಶಿಪ್ ದೊರೆತಿದೆ. ಇದೀಗ ಗುಕೇಶ್ ಅವರು ತಮ್ಮ ಪೋಷಕರ ಜೊತೆ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ರಜನಿಕಾಂತ್ ಅವರು ಗುಕೇಶ್ಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಅಲ್ಲದೇ, ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
‘ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಾರೈಕೆಗಳಿಗೆ ಧನ್ಯವಾದಗಳು. ನಮ್ಮನ್ನು ಮನೆಗೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯವಾದ ಸಮಯ ಕಳೆದು, ಜ್ಞಾನ ಹಂಚಿಕೊಂಡಿದ್ದಕ್ಕೆ ಧನ್ಯವಾದ ಸರ್’ ಎಂದು ಗುಕೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ಅಮರನ್’ ಸಿನಿಮಾದ ಯಶಸ್ಸಿನಲ್ಲಿ ಇರುವ ನಟ ಶಿವಕಾರ್ತಿಕೇಯನ್ ಅವರು ಡಿ. ಗುಕೇಶ್ ಮತ್ತು ಅವರ ಕುಟುಂಬದವರ ಜೊತೆ ಕಾಲ ಕಳೆದಿದ್ದಾರೆ. ಚೆಸ್ ವಿನ್ಯಾಸ ಇರುವ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಗುಕೇಶ್ಗೆ ಅವರು ವಾಚ್ ಗಿಫ್ಟ್ ನೀಡಿದ್ದಾರೆ. ಈ ಫೋಟೋವನ್ನು ಕೂಡ ಗುಕೇಶ್ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.