ಚಾಮರಾಜನಗರ:- ಕೈಯಲ್ಲಿ ತುಳಸಿ ಮಾಲೆ, ರಾಮನ ಪುಸ್ತಕ ಹಾಗೂ ಮಂತ್ರಾಕ್ಷತೆ ಹಿಡಿದು ಪದ್ಮಾಸನ ಕುಳಿತ ಕೈದಿಗಳು.. ಮತ್ತೊಂದೆಡೆ ರಾಮನ ಜಪ ಮಾಡುತ್ತ ತನ್ಮಯವಾಗಿರುವ ಅಧಿಕಾರಿಗಳು.. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರದ ಬಂಧಿಖಾನೆಯಲ್ಲಿ.
ನ್ಯಾಯಾಧೀಶರಾದ ಶ್ರೀಧರ್ ನೇತೃತ್ವದಲ್ಲಿ ಜನಾರ್ದನ ದೇವಾಲಯದ ಮುಖ್ಯ ಅರ್ಚಕರಾದ ಅನಂತ್ ಪ್ರಸಾದ್ ಹಾಗೂ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಇಂದು ವಿಚಾರಣಧೀನ ಕೈದಿಗಳಿಗೆ ಅಯೋಧ್ಯೆ ಮಂತ್ರಾಕ್ಷತೆ, ರಾಮನ ಪುಸ್ತಕ ಹಾಗೂ ತುಳಸಿ ಮಾಲೆ ನೀಡಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಿದ್ರು.
ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಜೊತೆಗೆ ಮಂತ್ರಾಕ್ಷತೆ ಸಹ ಸಿಗಲಿದೆ, ಆದ್ರೆ ಒಂದಲ್ಲಾ ಒಂದು ಕಾರಣಕ್ಕೆ ತಪ್ಪು ಮಾಡಿ ಜೈಲು ಸೇರಿರುವ ಇವರಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು. ಇನ್ನು ತುಳಸಿ ಮಾಲೆ, ಮಂತ್ರಾಕ್ಷತೆ ಪಡೆದ ಕೆಲ ಕೈದಿಗಳು ಕೆಲ ಕಾಲ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗವು ಸಹ ನಡೆಯಿತು