ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಸೇರಿ ಮೂವರು ಕ್ರಿಕೆಟಿಗರಿಗೆ ಆಹ್ವಾನ ನೀಡಲಾಗಿದೆ. ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾದಲ್ಲಿ ಜ. 22 ರಂದು ಪಾಲ್ಗೊಳ್ಳಲು ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ ನೀಡಲಾಗಿದೆ.
ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿತ್ತು. ಅದರಂತೆ ಕ್ರಿಕೆಟ್ ದೇವರು ಈ ಶುಭ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಹಾಗೆಯೇ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೂ ಈಗಾಗಲೇ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಅವರು ಧೋನಿಗೆ ಸೋಮವಾರ ಆಹ್ವಾನ ಪತ್ರಿಕೆ ಹಸ್ತಾಂತರಿಸಿದ್ದಾರೆ.