ಮಂಗಳೂರು:- ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮಸಾಜ್ ಪಾರ್ಲರ್ ಮೇಲೆ ಗುರುವಾರ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಾರ್ಶ್ವನಾಥ ತೀರ್ಥಂಕರ ಆದರ್ಶ ಅಳವಡಿಕೆಯಿಂದ ಉತ್ತಮ ಜೀವನ ಸಾಧ್ಯ: ಓಂಪ್ರಕಾಶ್ ಬಿರ್ಲಾ..!
ರಾಮ್ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಆರೋಪಿಗಳನ್ನು ಬರ್ಕೆ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಲ್ಲಿನ ಬಿಜೈ ಬಳಿ ಇರುವ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿ, ಅಲ್ಲಿರುವ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು. ಈ ರೀತಿ ದಾಳಿ ನಡೆಸುವುದು ತಪ್ಪು, ದಾಳಿಕೋರರನ್ನು ಕೂಡಲೇ ಬಂಧಿಸುವಂತೆ ಗೃಹ ಸಚಿವ ಜಿ ಪರಮೇಶ್ವರ್ ಸೂಚನೆ ನೀಡಿದ ಬೆನ್ನಲ್ಲೆ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಜನರನ್ನು ಪೊಲೀಸರು ಬಂಧನ ಮಾಡಿದ್ದರು. ಸದ್ಯ ಈ ಎಲ್ಲಾ ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.