ಪಾಟ್ನಾ: ಬಿಹಾರ ಸಚಿವ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರು ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ (Pran Prathistha Ceremony) ಮುನ್ನ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.
Recruitment: ನಿಮ್ಹಾನ್ಸ್’ನಲ್ಲಿ ಕೆಲಸ ಖಾಲಿ ಇದೆ..! ತಿಂಗಳಿಗೆ ₹ 90,000 ಸಂಬಳ – ಇಂದೇ ಕೊನೆ ದಿನಾಂಕ
ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಶ್ರೀರಾಮನು ತನ್ನ ಕನಸಿನಲ್ಲಿ ಬಂದಿದ್ದಾನೆ. ಜನವರಿ 22 ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ನನ್ನ ಬಳಿ ಹೇಳಿದ ಎಂದು ತೇಜ್ ಪ್ರತಾಪ್ ಹೇಳಿದ್ದಾರೆ. ಇದೀಗ ಇವರ ಹೇಳಿಕೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ತೇಜ್ ಪ್ರತಾಪ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.