ಧಾರವಾಡ: ಧಾರವಾಡದ ನಗರ ಸಾರಿಗೆ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಶಂಕು ಸ್ಥಾಪನೆ ನೆರವೇರಿಸಿದರು. 13 ಕೋಟಿ ರೂಪಾಯಿ ವೆಚ್ಚದಲ್ಲಿ ಧಾರವಾಡದ ಸಿಬಿಟಿ ನವೀಕರಣಗೊಳ್ಳಲಿದೆ. ಈ ನವೀಕರಣ ಕಾಮಗಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೂಮಿಪೂಜೆ ನೆರವೇರಿಸಿದ್ದು, ಇವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೂಡ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಧಾರವಾಡ ಸಿಬಿಟಿ ಬಹಳ ಹಳೆಯದಾದ ಕಟ್ಟಡಗಳನ್ನು ಹೊಂದಿದೆ. ಈಗ ಈ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಒಂದು ವರ್ಷದ ಅವಧಿಯಲ್ಲಿ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಇದಕ್ಕಿಂತ ಒಳ್ಳೆ ಸೇವಿಂಗ್ಸ್ ಮತ್ತೊಂದಿಲ್ಲ..! ದಿನಕ್ಕೆ 50 ರೂಪಾಯಿ ಉಳಿಸಿ 30 ಲಕ್ಷ ನಿಮ್ಮದಾಗಿಸಿಕೊಳ್ಳಿ.!
ನಗರ ಸಾರಿಗೆ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಹೆಚ್ಚುವರಿ ಬಸ್ಗಳ ಖರೀದಿ ಮಾಡಲಾಗುತ್ತಿದ್ದು, ಇದರಿಂದ ಬಸ್ಗಳ ಕೊರತೆ ನೀಗಲಿದೆ. ಅಂದಾಜು 50 ವರ್ಷಗಳ ಹಳೆಯದಾದ ಧಾರವಾಡದ ಸಿಬಿಟಿಯನ್ನು ಇದೀಗ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಶಾಸಕ ಎನ್.ಎಚ್.ಕೋನರಡ್ಡಿ, ಸಾರಿಗೆ ಇಲಾಖೆ ಎಂಡಿ ಭರತ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.