ರಾಮನಗರ:– ಒಂಟಿ ಸಲಗ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಮಗಳಿಗೆ ಕೆಲಸ ನೀಡಲು ಡಿಕೆಶಿ ಸೂಚನೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಹರಳಿಕರೆ ದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ ವಿಚಾರವನ್ನು ಅರಣ್ಯಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ.
ತಿಮ್ಮಪ್ಪ (64) ಮುಂಜಾನೆ ಜಮೀನಿಗೆ ತೆರಳಿದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. 12 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಡಿಸಿಎಂ ಗೆ ಮಾಹಿತಿ ನೀಡಿದರು.
ಮೃತರ ಕುಟುಂಬಕ್ಕೆ ಪರಿಹಾರ ನೀಡಿ, ಬ್ಯಾರಿಕೇಡ್ ಅಳವಡಿಸಿ. ಜತೆಗೆ ಆ ಹೆಣ್ಣು ಮಗಳಿಗೆ ನಿಮ್ಮ ಇಲಾಖೆಯಲ್ಲಿ ಕೆಲಸ ನೀಡಿ ಎಂದು ಸೂಚನೆ ನೀಡಿದ್ದಾರೆ.