ರಾಮನಗರ:- ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಲು ಮುಂದಾಗಿರುವ ಡಿಕೆಶಿಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ಅವರು ಮಹತ್ವದ ಸಲಹೆ ಕೊಟ್ಟಿದ್ದಾರೆ.
Teachers Romance: ಶಾಲೆಯಲ್ಲೇ ಹೆಡ್ ಮಾಸ್ಟರ್- ಲೇಡಿ ಟೀಚರ್ ಫುಲ್ ರೊಮ್ಯಾನ್ಸ್..!
ಹೊಸ ಸರ್ಕಾರ ರಚನೆ ಮಾಡಿದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ಯಾಕೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಬೆಂಗಳೂರು ವಂಶಸ್ಥರು ನಾವು, ಅಲ್ಲಿಗೆ ಸೇರಬೇಕು. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ತುಂಬಬಹುದು ಎಂದು ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.
ನಾನು ಬೆಂಗಳೂರಿಗೆ ನಾಲ್ಕು ತಾಲೂಕುಗಳನ್ನು ಸೇರಿಸುತ್ತೇನೆ . ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು. ರಾಮನಗರ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ. ರಾಮನ ಹೆಸರು ಇರುವುದು ಒಂದು ಭಾಗ. ರಾಮನಗರಕ್ಕೆ ಅದರದ್ದೇ ಆದ ಒಂದು ಇತಿಹಾಸ ಇದೆ. ಅಲ್ಲಿ ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಾಟಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದು ಕಲಿಯಲಿ ಎಂದು ಕಿಡಿಕಾರಿದರು.
ರಾಮನಗರ ನಾವು ಮಾಡಿದ್ದು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ. ಯಾವುದರ ಬೆಲೆ ಏರಿಕೆಯಾಗಿದೆ ಗೊತ್ತಿದೆ. ಹಿಂದೆ ಕನಕಪುರ ಸಾತನೂರು ಹೇಗಿತ್ತು, ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು. ಈಗ ರಾಮನಗರ ಹೆಸರು ಬದಲಾಯಿಸಿದರೂ ನಾನು ಮತ್ತೆ ಬಂದೇ ಬರ್ತಿನಿ ಆ ವಿಶ್ವಾಸ ಇದ್ದೆ ಇದೆ ಎಂದು ಖಡಕ್ ಆಗಿ ಹೇಳಿದರು.
ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಎಂದು ಇದೆಯಲ್ಲ. ಬೇರೆ ಹೆಸರು ಇಟ್ಟಿದ್ದರೆ ಆಗಿರೋದು ಆದರೆ ಅದು ಮಾಡುತ್ತಿಲ್ಲ. ಅವರು ಮಾತ್ರ ಬೆಂಗಳೂರಿನವರು ಅವರ ಸಾಧನೆ ಚಿರಾಯುವಾಗಿ ಉಳಿಯಬೇಕು. ನಾವೇನು ಸಾಧನೆ ಮಾಡಿದ್ದೇವೆ. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತೆ ಅವರು ಹೇಳಬೇಕು ಎಂದರು.