ರಾಮನಗರ:– ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಜರುಗಿದೆ.
ಮೃತ ರೈತನನ್ನು 65 ವರ್ಷದ ಕರಿಯಪ್ಪ ಎಂದು ಗುರುತಿಸಲಾಗಿದೆ. ಕರಿಯಪ್ಪ ಜಮೀನಿನಲ್ಲಿ ಹಾಕಿದ್ದ ಮೆದೆ ನೋಡಲು ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ತಕ್ಷಣ ಗಾಯಾಳು ಕರಿಯಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಕರಿಯಪ್ಪ ಕೊನೆಯುಸಿರೆಳೆದಿದ್ದಾರೆ.
ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ಕರಿಯಪ್ಪ ಮೃತದೇಹವನ್ನು ರವಾನಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.