ಹುಬ್ಬಳ್ಳಿ: ಶ್ರೀ ರಂಭಾಪುರಿ ಜಗದ್ಗುರುಗಳ 68ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಶ್ರೀಮದ್ವೀರಶೈವ ಸದ್ಭೋದನ ಸಂಸ್ಥೆ ಹುಬ್ಬಳ್ಳಿ ತಾಲೂಕ ಘಟಕದ ಅಧ್ಯಕ್ಷರಾದ ಪ್ರಕಾಶ ಬೆಂಡಿಗೇರಿ ಇವರ ಅಧ್ಯಕ್ಷತೆಯಲ್ಲಿ ಹಳೆ ಹುಬ್ಬಳ್ಳಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವೀರಭದ್ರ ಸ್ವಾಮಿ ಮೂರ್ತಿಗೆ ಮಹಾರು ದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ ನಂತರ ದುರ್ಗದ ಬಯಲಿನಲ್ಲಿ,
ರಂಭಾಪುರಿ ಜಗದ್ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬ ವನ್ನು ಅತಿ ವಿಜ್ರಂಭಬ
ಯಿಂದ ಆಚರಿಸಲಾಯಿತು . ನಂತರ ಎಲ್ಲರಿಗೂ ಸಿಹಿ ಹಂಚುವ ಮೂಲಕ ನೆರವೇರಿಸಲಾಯಿತು ಈ ಕಾರ್ಯಕ್ರಮದಲ್ಲಿ ಶೇಖರಗೌಡ್ರು ಪಾಟೀಲ್, ಹನುಮಂತ ಅಂಕಲಗಿ, ಈಶ್ವರ್ ಬದ್ರಾಪುರ, ವೀರಭದ್ರಪ್ಪ ಮೇಟಿ ,ಪದ್ಮಾವತಿ ಬಾಗಲಕೋಟೆ, ಬಸವರಾಜ್ ಪೂಜಾರ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು