ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಸ್ನೇಹಿತರ ಜೊತೆಗೆ ಮಹಾಕುಂಭಮೇಳಕ್ಕೆ ತೆರಳಿರುವ ರಮೇಶ್ ಜಾರಕಿಹೊಳಿ, ಪ್ರಯಾಗ್ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗಾಗಿ ಒತ್ತಾಯಿಸಿ ಓಡಾಟ ನಡೆಸುತ್ತಿದ್ದು, ಇದರ ಮಧ್ಯೆಯೂ ಪ್ರಯಾಗ್ರಾಜ್ ಗೆ ಭೇಟಿ ನೀಡಿದ್ದು, ಪುಣ್ಯಸ್ನಾನ ಮಾಡಿದ್ದಾರೆ. ಮೊನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಪತ್ನಿ ಸಮೇತ ಪ್ರಯಾಗ್ರಾಜ್ ಗೆ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದರು.