ಬೆಂಗಳುರು: ಸಿಲಿಕಾನ್ ಸಿಟಿಯನ್ನೇ ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಫೋಟ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ 3000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ರಾಮೇಶ್ವರಂ ಕೆಫೆ ಸ್ಪೋಟ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ 3000 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು ಐವರನ್ನ ಆರೋಪಿಗಳ ವಿರುದ್ದ ಕೂಡ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಮಾಜ್ ಮುನೀರ್ , ಅಬ್ದುಲ್ ಮತೀನ್ ತಾಹ, ಮುಸಾವೀರ್, ಮುಜಾಮಿಲ್ ಷರೀಪ್ ಸೇರಿ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರುವ ಎನ್ ಐ ಎ ಅಧಿಕಾರಿಗಳು
ಮಾರ್ಚ್ 1 ಒಂದರಂದು ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದಿತ್ತು ಸುಮಾರು ಹತ್ತಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ರು ರವೆ ಇಡ್ಲಿ ತಿಂದು ಬಾಂಬ್ ಇಟ್ಟು ಹೋಗಿದ್ದ ಮುಸಾವೀರ್ ನಂತರ ಕೋಲ್ಕತ್ತಾದ ಬಳಿ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹ ಬಂಧನವಾಗಿತ್ತು