ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಐಸಿಸ್ ತರಬೇತಿಯ ವಿವರ ಬಹಿರಂಗವಾಗಿದೆ.
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ: ಬೆಚ್ಚಿಬಿದ್ದ ಆನೇಕಲ್ ಮಂದಿ!
ಕೋರ್ಟ್ ಗೆ NIA ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಮತ್ತೊಂದು ಸ್ಪೋಟಕ ವಿಚಾರ ಬಯಲಾಗಿದೆ. ಬಾಂಬ್ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ.
ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್ ಜೊತೆ ನಂಟು ಇಟ್ಟುಕೊಂಡಿದ್ದರು. ಈ ಆರು ಜನ ಉಗ್ರರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್ಲೈನ್ ಮೂಲಕ ಐಸಿಸ್ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ.
ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.