ರಾಮನಗರ : ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ ಕ್ಯೂಆರ್ ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ರಣಹೇಡಿ ಎಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ರಣಹೇಡಿ ನಾನಲ್ಲ, ರಣಹೇಡಿಗಳು ಅವರು, ಕುತಂತ್ರದ ರಾಜಕಾರಣಿಗಳು ಅವರು. ಯಾರು ರಣಹೇಡಿ ಎಂದು ಮುಂದೆ ಚರ್ಚೆ ಮಾಡೋಣ. ರಣಹೇಡಿ ಸಂಸ್ಕೃತಿ ಡಿಕೆ ಶಿವಕುಮಾರ್ ಅವರದ್ದು. ನಾವು ನೇರವಾಗಿಯೇ ಚುನಾವಣೆ ಮಾಡುತ್ತಿದ್ದೇವೆ ಎಂದು ಗುಡುಗಿದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ರಾತ್ರೋರಾತ್ರಿ ಹೋಗಿ ಕಳ್ಳಕಳ್ಳವಾಗಿ ಜನರಿಗೆ ಕ್ಯೂ ಆರ್ ಕೋಡ್ ಇರುವ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಿದ ವ್ಯಕ್ತಿ ರಣಹೇಡಿತನದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದ ಅವರು, ಗಿಫ್ಟ್ ಕೂಪನ್ ಬಗ್ಗೆ ಚುನಾವಣಾ ಆಯೋಗಕ್ಕೆ ಈಗ ದೂರು ಕೊಟ್ಟರೂ ಏನು ಪ್ರಯೋಜನ ಇಲ್ಲ. ಹಿಂದೆ ಹಲವು ಬಾರಿ ದೂರು ಕೊಟ್ಟರೂ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ದೂರು ಕೊಟ್ಟರೆ ಏನು ಉಪಯೋಗ? ಎಂದು ಅಸಮಾಧಾನ ವ್ಯಕ್ತಪಡಿಸಿದರು.