ಬೆಂಗಳೂರು:- ಚಿನ್ನ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಚಿನ್ನದ ಬಿಸ್ಕೇಟ್ ಕಳ್ಳಸಾಗಣಿಕೆ ಹಿಂದೆ ಪ್ರಭಾವಿ ಸ್ವಾಮೀಜಿ ಕೃಪಾಕಟಾಕ್ಷವೂ ಇದೆ ಎಂಬ ಅಂಶ ಡಿಆರ್ಐ ಮೂಲಗಳಿಂದ ಮಾಹಿತಿ ದೊರೆತಿದೆ.
ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈನಲ್ಲಿ ಆಫೀಸ್ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್ನಲ್ಲಿ ಸ್ವಾಮೀಜಿ ಕ್ರಿಫ್ಟೋ ಕರೆನ್ಸಿ, ಹಣ ವಿನಿಮಯ ವ್ಯವಹಾರ ಮಾಡುತ್ತಿದ್ದರು. ಸ್ವಾಮೀಜಿ ರಾಜಕೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿನಲ್ಲಿನ ಸ್ವಾಮೀಜಿ ಮನೆ ಮೇಲೆ ಡಿಆರ್ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.
ಚಿನ್ನ ಕಳ್ಳಸಾಗಾಣಿಕೆ ಆರೋಪದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ತನಿಖೆಯನ್ನು ಡಿಆರ್ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಡಿಆರ್ಐ ಅಧಿಕಾರಿಗಳಿಗೆ ಒಂದೊಂದೆ ಅಸಲಿಯತ್ತು ತಿಳಿಯುತ್ತಿದೆ