ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ರನ್ಯಾ ರಾವ್ಗೆ ದಿನದಿಂದ ದಿನಕ್ಕೆ ಕಾನೂನಿನ ಕುಣಿಕೆ ಬಿಗಿಯಾಗುತ್ತಾ ಸಾಗುತ್ತಿದೆ. ಸದ್ಯ ಈ ಸ್ಮಗ್ಲಿಂಗ್ ಕೇಸ್ನ್ನು ಮೂರು ಆಯಾಮಗಳಲ್ಲಿ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಇನ್ನೂ ಇದರ ನಡುವೆ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ನಟಿ ರನ್ಯಾ ರಾವ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂಬುವುದು ಡಿಆರ್ಐ ತನಿಖೆ ವೇಳೆ ಬಹಿರಂಗವಾಗಿದೆ.
ಕಾರಿನಲ್ಲಿ ನೀರಿನ ಬಾಟಲಿಗಳನ್ನು ಇಟ್ಟುಕೊಳ್ಳುವ ಅಭ್ಯಾಸವಿದೆಯೇ? ಹಾಗಾದ್ರೆ ಕ್ಯಾನ್ಸರ್ ಇರಬಹುದು! ಎಚ್ಚರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಹೆಚ್ಚುವರಿ ಕಾರು ಅಧಿಕಾರಿಯವರ ಕುಟುಂಬದವರಿಗೆ ಬಳಕೆಯಾಗುತ್ತದೆ. ಅದೇ ರೀತಿ, ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಕೂಡ ಸರ್ಕಾರ ಹೆಚ್ಚುವರಿ ಕಾರು ನೀಡಲಾಗಿತ್ತು. ಈ ಸರ್ಕಾರಿ ವಾಹನದಲ್ಲೇ ರನ್ಯಾ ರಾವ್ ಚಿನ್ನವನ್ನು ಸಾಗಿಸಿದ್ದಾರೆ. ರನ್ಯಾ ರಾವ್ ಇದೇ ವಾಹನದಲ್ಲಿ ಹಲವು ಬಾರಿ ವಿಮಾನ ನಿಲ್ದಾಣಕ್ಕೆ ಓಡಾಡುತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಇನ್ನೂ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಾಧೀಶರಾದ ವಿಶ್ವನಾಥ್ ಸಿ ಗೌಡರ್ ಅವರಿಂದ ಆದೇಶ ನೀಡಿದ್ದು. ಆರೋಪಿ ತರುಣ್ ಕೊಂಡೂರು ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ.