ಕೊಪ್ಪಳ : ವಿದೇಶಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲೀಕೆ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಮೂವರ ಬಂಧನವಾಗಿದೆ. ಇನ್ನೂ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮೂರು ದಿನ ಕಾಲ ಕೋರ್ಟ್ ಕಸ್ಟಡಿಗೆ ನೀಡಿ ಗಂಗಾವತಿ ನ್ಯಾಯಾಲಯ ಆದೇಶ ನೀಡಿದೆ.
ಮಲ್ಲೇಶ್, ಚೇತನಸಾಯಿ, ಶರಣಬಸವ ಬಂಧಿತ ಅರೋಪಿಗಳಾಗಿದ್ದು, ಮೂವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಕೊಪ್ಪಳದಲ್ಲಿ ತಲೆತಗ್ಗಿಸುವ ಘಟನೆ ; ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಹತ್ಯೆ
ಗಂಗಾವತಿ ತಾಲೂಕಿನ ಸಣಾಪೂರ ಕೆರೆ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರನ್ನು ಕೆರೆಗೆ ತಳ್ಳಿ, ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಅತ್ಯಾಚಾರವೆಸಗಿದ್ದರು.