ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ವೈದ್ಯಕೀಯ ತಪಾಸಣೆ ನಡೆಯಲಿದೆ. ಸಿಐಡಿಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆ ಗೊಳಪಟ್ಟಿದ್ದ ಪ್ರಜ್ವಲ್ ರೇವಣ್ಣ ಶನಿವಾರ ಎರಡನೇ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಲಿದ್ದಾರೆ. ಬೆಳಗ್ಗೆ 11 ಗಂಟೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಶಿವಾಜಿನಗರದಲ್ಲಿರುವ ಲೇಡಿ ಕರ್ಜನ್ ಹಾಗೂ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
Virat Kohli Dating: ಅನುಷ್ಕಾ ಜೊತೆಗಿನ ಮದುವೆಗೂ ಮುನ್ನ 5 ಮಂದಿಯೊಂದಿಗೆ ಡೇಟಿಂಗ್ ಮಾಡಿದ್ದ ಕೊಹ್ಲಿ!
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ 44 ವರ್ಷದ ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಮೇ 1ರಂದು ಸಿಐಡಿಗೆ ದೂರು ನೀಡಿದ್ದರು. ಬಳಿಕ 60 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಸಿಐಡಿಯಲ್ಲಿ ಎರಡನೇ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.