ಹಾಸನ:- ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಕೀಲ ದೇವರಾಜೇಗೌಡ(Devaraje Gowda) ಅವರು ಇಂದು ಬಿಡುಗಡೆ ಆಗಿದ್ದಾರೆ. ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಗುಡ್ ನ್ಯೂಸ್: ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ…!
ಜೂನ್ 5ರಂದು ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಿಸಿತ್ತು. ಆದರೆ, ಹೈಕೋರ್ಟ್ ಜಾಮೀನು ನೀಡಿದ್ದರಿಂದ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡರನ್ನು ಬಿಡುಗಡೆ ಮಾಡಲಾಗಿದೆ.
2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಆದರೆ, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿತ್ತು.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರಿಗೆ ಹಾಗೂ ಹಲವು ಗಣ್ಯರಿಗೆ ತುಂಬು ಹೃದಯದಿಂದ ಧನ್ಯವಾದ ತಿಳಿಸುತ್ತೇನೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಬಂಧನದ ಬಗ್ಗೆ ಮಾತನಾಡಿದ್ದರು. ಇನ್ನು 51 ದಿನಗಳ ಬಳಿಕ ಹೊರಗೆ ಬಂದಿದ್ದೇನೆ. ನನ್ನ ಜಿಲ್ಲೆಯ ಲಕ್ಷಾಂತರ ಕಾರ್ಯಕರ್ತರು, ನಾಯಕರು ಸಾವಿರಾರು ವಕೀಲರ ಪ್ರಾರ್ಥನೆ ಭಗವಂತನಿಗೆ ಮುಟ್ಟಿದೆ. ಉಸಿರು ಇರುವವರೆಗೂ ಯಾರನ್ನು ಮರೆಯೊದಿಲ್ಲ ಎಂದರು.
ಹಲವು ಕಾರಣದಿಂದ ಕೆಲವು ವಿಚಾರ ಈಗ ಹೇಳಲ್ಲ, ಅದಕ್ಕಾಗಿ ಒಂದು ಸಮಯ ನಿಗದಿ ಆಗುತ್ತದೆ. ನನ್ನ ಬಂಧನ ಅನಿರೀಕ್ಷಿತ ಅಲ್ಲ, ನಿರೀಕ್ಷಿತ. ಕುಟುಂಬ ದ್ಚೇಷಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಸನ ಜಿಲ್ಲೆಯ ಮಾನ ಹರಾಜಾಗಿದೆ. ಮುಂದಿನ ತಿಂಗಳು. ಅಂದರೆ ಆ.15 ರೊಳಗೆ ಒಂದು ದಿನಾಂಕ ನಿಗದಿ ಮಾಡುತ್ತೇನೆ. ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಅವರನ್ನು ಬೇಟಿಯಾಗುತ್ತೇನೆ. ಎಲ್ಲಾ ಕೇಂದ್ರ ಸಚಿವರನ್ನು ಕರೆದು ಬೃಹತ್ ಸಮಾವೇಶ ಮಾಡುತ್ತೇನೆ ಎಂದರು.