ಮಡಿಕೇರಿ:- ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಮಡಿಕೇರಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ: ಶಂಕಿತ ದಾಳಿಕೋರ ಬಂಧನ!
ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಎಂ.ವಿ ರಮೇಶ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ಕಾಮುಕ ಎನ್ನಲಾಗಿದೆ.
ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಎಂ. ಮಹೇಶ್ ಹಾಗೂ ತನಿಖಾ ಸಹಾಯಕ ಹೆಚ್.ಎಸ್ ಲೋಕೇಶ್ ಅವರು 2021ರ ಸೆಪ್ಟಂಬರ್ 16 ರಂದು ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿ ರಮೇಶ್ನನ್ನು ದೋಷಿ ಎಂದು ಗುರುತಿಸಿ ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.