ತೆಲಂಗಾಣ:- ಇಲ್ಲಿನ ಸಿದ್ದಿಪೇಟ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.
Navarathri 2024: ನವರಾತ್ರಿ ಸಂದರ್ಭದಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ, ಸಕಲ ಸಂಪತ್ತು ನಿಮ್ಮದಾಗುತ್ತೆ!
ಘಟನೆಯಿಂದ ಆಕ್ರೋಶಗೊಂಡ ಹುಡುಗಿ ಕುಟುಂಬಸ್ಥರು, ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಆರೋಪಿಯ ಮನೆಯನ್ನು ಸುಟ್ಟುಹಾಕಿದರು. ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಲು ಮತ್ತು ಶಾಂತಿ ಪುನಃಸ್ಥಾಪಿಸುವಲ್ಲಿ ಯಶಸ್ವಿಯಾದರು.
ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿ ಕಾಪಾಡಿದರು. ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.