ದಾವಣಗೆರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 10ವರ್ಷ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರದ ಹಳೇ ಹರ್ಲಾಪುರದ ಸೈಯದ್ ಮೋಸಿನ್(೧೯) ಶಿಕ್ಷೆಗೊಳಗಾದ ವ್ಯಕ್ತಿ.
೧೭ ವರ್ಷದ ಅಪ್ರಾಪ್ತೆಯನ್ನು ೨೧-೧೨-೨೦೨೦ ರಂದು ಸೈಯದ್ ಮೋಸಿನ್ ಅಪಹರಿಸಿಕೊಂಡು ಹೋಗಿದ್ದು, ನಂತರ ಬಾಲಕಿಯನ್ನು ದಿ : ೧೮-೦೧-೨೦೨೧ ರಂದು ಪೊಲೀಸರು ಪತ್ತೆ ಮಾಡಿದ್ದರು. ಈತ ತನ್ನನ್ನು ಅಪಹರಿಸಿಕೊಂಡು ಗೋವಾ, ಮುಂಭೈಗೆ ಕರೆದುಕೊಂಡು ಹೋಗಿ ನಂತರ ಪುಣೆಗೆ ಕರೆದುಕೊಂಡು ಹೋಗಿ ಅಲ್ಲಿ ರಮಾಬಾಯಿ ಅಂಬೇಡ್ಕರ್ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದು, ಸಂತ್ರಸ್ಥೆಯ ಮೇಲೆ ಒತ್ತಾಯಪೂರ್ವಕವಾಗಿ ಅತ್ಯಾಚಾರ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ಪೋಷಕರು ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಬಂಧಿಸಿದ್ದರು. ಈತನ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-೧ ನ್ಯಾಯಾಲಯ ವಿಚಾರಣೆ ನಡೆಸಿ ನ್ಯಾಯಾಧೀಶರಾದ ಶ್ರೀರಾಮ್ ನಾರಾಯಣ ಹೆಗಡೆ ರವರು *ಆರೋಪಿ ಸೈಯದ್ ಈತನ ಮೇಲೆ ಆರೋಪ ಸಾಬೀತಾಗಿದ್ದರಿಂದ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿದ್ದು ಮತ್ತು ಆರೋಪಿಯು ದಂಡದ ಮೊತ್ತವನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ತೀರ್ಪು ನೀಡಿದೆ.
ಸದರಿ ಪ್ರಕರಣದಲ್ಲಿ ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿರುತ್ತಾರೆ. ಮೇಲ್ಕಂಡ ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿಯಾದ ಸತೀಶ್ ಕುಮಾರ್ .ಯು, ಸಿಪಿಐ, ಹರಿಹರ ವೃತ್ತ ರವರನ್ನು ಹಾಗೂ ಸಿಬ್ಬಂದಿಗಳನ್ನು ಹಾಗೂ ಪಿರ್ಯಾದಿದಾರರ ಪರವಾಗಿ ನ್ಯಾಯಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ, ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ವಿಜಯಕುಮಾರ್ ಎಂ. ಸಂತೋಷ & ಜಿ. ಮಂಜುನಾಥ ರವರು ಶ್ಲಾಘಿಸಿದ್ದಾರೆ.