ಬೆಂಗಳೂರು: ಜಯನಗರ ಠಾಣಾ ವ್ಯಾಪ್ತಿಯಲ್ಲಿ 22 ವರ್ಷದ ಯುವಕನೋರ್ವ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೂರಿನ ಆಧಾರದ ಮೇಲೆ ಪೊಲೀಸರು (Police) ಜಯನಗರ ನಿವಾಸಿ ಆರೋಪಿ ಶರವಣ (22) ಅನ್ನು ಬಂಧಿಸಿ ಪೋಕ್ಸೊ(POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬುಧವಾರ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.
ನಾವು ಬೆಳಿಗ್ಗೆ ಕೆಲಸಕ್ಕೆ ಹೋಗಿ, ಸಂಜೆ ಬರುತ್ತೇವೆ. ನಮ್ಮ ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದೇವು. ಮಗಳು ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಆರೋಪಿ ಆಕೆಯ ಬಾಯಿ ಗಟ್ಟಿಯಾಗಿ ಮುಚ್ಚಿ ಕರೆದುಕೊಂಡು ಹೋದನು. ಕಿರಿದಾದ ರಸ್ತೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.