ಬೆಂಗಳೂರು:- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ 11 ವರ್ಷದ ಬಾಲಕಿ ಮೇಲೆ ರೇಪ್ ಮಾಡಿರುವ ಘಟನೆ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್-ಬಿಪಿ ಸಹ ಇರತ್ತೆ ಕಂಟ್ರೋಲ್!
ಪೇಂಟಿಂಗ್ ಕೆಲಸ ಮಾಡುತ್ತಿದ್ದ 43 ವರ್ಷದ ಚಂದ್ರಶೇಖರ ಬಂಧಿತ ಆರೋಪಿ. ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ ಚಾಕೊಲೇಟ್ ಕೊಟ್ಟು ಆಸೆ ತೋರಿಸಿ ಬಾಲಕಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯನ್ನ ಕರೆದೊಯ್ಯುವುದನ್ನ ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಾಗಿಲು ಮುರಿದು ಒಳನುಗಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.