ಅಲಹಾಬಾದ್:- ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಗರ್ಭಪಾತದ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ.
ಏರ್ ಶೋ: ಇಂದಿನಿಂದ 2 ದಿನ ಬೆಂಗಳೂರಿನ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರನ್ನೊಳಗೊಂಡ ಇಬ್ಬರು ನ್ಯಾಯಾಧೀಶರ ಪೀಠವು 17 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದೆ.
ಅತ್ಯಾಚಾರದಿಂದ ಯುವತಿ ಅಥವಾ ಮಹಿಳೆ ಗರ್ಭಿಣಿಯಾದರೆ ಆ ಮಗುವನ್ನು ಉಳಿಸಿಕೊಳ್ಳಬೇಕೇ, ಬೇಡವೇ ಎಂದು ನಿರ್ಧರಿಸಲು ಆಕೆಗೆ ಹಕ್ಕಿದೆ. ಕಾನೂನು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ತನ್ನ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸಲು ಹಕ್ಕನ್ನು ಒದಗಿಸುತ್ತದೆ ಎಂದು ಕೋರ್ಟ್ ಹೇಳಿದೆ.
ವೈದ್ಯಕೀಯ ಗರ್ಭಪಾತ ಕಾಯ್ದೆಯ ಸೆಕ್ಷನ್ 3(2) ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಗೆ ತನ್ನ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಅಂತ್ಯಗೊಳಿಸುವ ಹಕ್ಕನ್ನು ಒದಗಿಸುತ್ತದೆ. ಆಕೆಗೆ ವೈದ್ಯಕೀಯವಾಗಿ ಗರ್ಭಪಾತವನ್ನು ಮಾಡಿಸಿಕೊಳ್ಳುವ ಅಥವಾ ಆ ಮಗುವನ್ನು ಹೆತ್ತು ಅದರ ಜವಾಬ್ದಾರಿ ವಹಿಸಿಕೊಳ್ಳುವ ಎರಡೂ ಹಕ್ಕುಗಳಿರುತ್ತದೆ. ಆಕೆಯ ಮಾತೃತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಹಕ್ಕನ್ನು ನಿರಾಕರಿಸುವುದು ಅವಳ ಘನತೆಯಿಂದ ಬದುಕುವ ಮಾನವ ಹಕ್ಕನ್ನು ನಿರಾಕರಿಸುವುದಕ್ಕೆ ಸಮಾನವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.