ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ (Ranbir Kapoor) , ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna), ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಅನಿಮಲ್ (Animal) ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಬಂದಿದೆ. ಚಿತ್ರಕ್ಕೆ ಸೆನ್ಸಾರ್ (Censor) ಆಗಿದ್ದು, ‘ಎ’ ಪ್ರಮಾಣ ಪತ್ರವನ್ನು ನೀಡಲಾಗಿದೆ. ಜೊತೆಗೆ ರಶ್ಮಿಕಾ ಮತ್ತು ರಣಬೀರ್ ಜೋಡಿಯ ಹಸಿಬಿಸಿ ದೃಶ್ಯಗಳನ್ನೂ ತೆಗೆದು ಹಾಕುವಂತೆ ಸೂಚಿಸಲಾಗಿದೆ.
ಈ ಚಿತ್ರದ ಬಗ್ಗೆ ಚಿತ್ರತಂಡಕ್ಕೆ ಸಾಕಷ್ಟು ನಿರೀಕ್ಷೆಯಿದೆ. ನಟ ರಣಬೀರ್ ಕಪೂರ್ ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಇದು ವಿಭಿನ್ನವಾದ ಸಿನಿಮಾ. ತಂದೆ – ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟೆಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ ಜೊತೆ ನಟನೆ ಮಾಡಿದ್ದು ಒಳ್ಳೆಯ ಅನುಭವ. ಜೊತೆಗೆ ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಜೀವ ತುಂಬಿದ್ದಾರೆ’ ಎಂದಿದ್ದಾರೆ.