ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಮಧ್ಯೆ ಪ್ರೀತಿ ಇದೆ ಅನ್ನೋದು ಗೊತ್ತೆ ಇದೆ. ಸಾಕಷ್ಟು ಕಡೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಜೋಡಿ ಹಕ್ಕಿಗಳು ನಡೆ ಇದೀಗ ಅನುಮಾನ ಹುಟ್ಟಿಹಾಕಿದೆ.
ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಬರ್ತ್ಡೇ ಇತ್ತು. ಆದರೆ, ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನದ ಶುಭಾಶಯ ಕೋರಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿದ್ದಾರೆ. ಹಲವು ಕಡೆಗಳಲ್ಲಿ ಇವರು ಪ್ರವಾಸ ತೆರಳಿದ್ದಾರೆ. ಆದರೆ, ಈ ವಿಚಾರದಲ್ಲಿ ಇವರು ಬಾಯಿ ಬಿಟ್ಟಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ವಿಜಯ್ ಬರ್ತ್ಡೇಗೆ ವಿಶ್ ಮಾಡದೆ ಇರುವುದು ಸಾಕಷ್ಟು ಅನುಮಾನ ಮೂಡಿಸಿದೆ.
ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡಗೆ ಇನ್ಸ್ಟಾಗ್ರಾಮ್ ಸ್ಟೇಟಸ್ ಮೂಲಕ ವಿಶ್ ಮಾಡಿದ್ದರು. ಈ ಬಾರಿ ಅವರು ಮುಂದಿನ ಸಿನಿಮಾದ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ ಅಷ್ಟೇ. ಅದನ್ನು ಹೊರತುಪಡಿಸಿ ಅವರು ಯಾವುದೇ ಸ್ಟೇಟಸ್ ಹಾಕಿಲ್ಲ.
ಇನ್ನೂ ಸಿನಿಮಾದ ವಿಚಾರಕ್ಕೆ ಬಂದರೆ, ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಸಿಕ್ಕಿದೆ. ‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ವಿಜಯ್ ದೇವರಕೊಂಡ ಮುಂದಿನ ಚಿತ್ರಕ್ಕೆ ರಶ್ಮಿಕಾ ನಾಯಕಿ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.