ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಬಂವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಬಳಿಕ ಮಧ್ಯಂತರ ಜಾಮೀನಿನ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಬೆನ್ನಲ್ಲೇ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ನಟಿಸಿರುವ ನಟಿ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಪರಿಸ್ಥಿತಿಯು ನಂಬಲಾಗದ ಆಘಾತವುಂಟು ಮಾಡಿದೆ ಎಂದು ರಶ್ಮಿಕಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನು ಏನು ನೋಡಿದೆನೋ ಅದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ಘಟನೆ ನಡೆದಿದ್ದು, ನಿರೀಕ್ಷಿತವಾಗಿ. ಇದರ ಬಗ್ಗೆ ಬೇಸರವಿದೆ. ನಟ ಅನ್ನೋ ಒಂದೇ ಒಂದು ಕಾರಣಕ್ಕೆ ಆರೋಪ ಹೊರಿಸುವುದನ್ನು ನೋಡಿದರೆ ಬೇಸರವಾಗುತ್ತದೆ. ಈ ಪರಿಸ್ಥಿತಿಯು ನಂಬಲಾಗದ ಆಘಾತವುಂಟು ಮಾಡಿದೆ ಎಂದು ರಶ್ಮಿಕಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ಮೃತ ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ಅಲ್ಲು ಅರ್ಜುನ್ ಸೇರಿ ಹಲವರನ್ನು ಬಂಧಿಸಲಾಗಿತ್ತು. ಅಲ್ಲು ಅರ್ಜುನ್ ಗೆ ಕೆಳ ಹಂತದ ಕೋರ್ಟ್ 14 ದಿನ ನ್ಯಾಯಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿಯಿಡೀ ಜೈಲಿನಲ್ಲೇ ಕಳೆದ ಅಲ್ಲು ಅರ್ಜುನ್ ಇಂದು ಮುಂಜಾನೆಯೇ ಬಿಡುಗಡೆಯಾಗಿದ್ದಾರೆ.