ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಂಕ್ರಾಂತಿ ದಿನದಂದು ಬರೋಬ್ಬರಿ ಆರು ಭಾಷೆಯಲ್ಲಿ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಕನ್ನಡದಲ್ಲಿ ಅವರು ಸಂಕ್ರಾಂತಿ ಬದಲು ಪೊಂಗಲ್ ಅಂತ ಬರೆದು ಶುಭಾಶಯ ಕೋರಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಆರು ಭಾಷೆಯಲ್ಲೂ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ.
ಒಂದು ಕಡೆ ರಶ್ಮಿಕಾ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ, ಮತ್ತೊಂದು ಕಡೆ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎಂದು ಸುದ್ದಿ ಹರಡಿದೆ.
ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.
ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರೂ ಇದರ ಬಗ್ಗೆ ತುಟಿಕ್ ಪಿಟಿಕ್ ಎಂದಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜನಾ? ಅಥವಾ ಗಾಸಿಪ್? ಇಬ್ಬರ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ.