ವಿಜಯಪುರ:- ಮಾಜಿ ಸಚಿವ ಹೆಚ್.ಆಂಜನೇಯ ಅಂತಹ ಅವಿವೇಕಿ ಮತ್ತೊಬ್ಬನಿಲ್ಲ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಹಿಂದೆ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ.
ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂಯರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತು ಹೆಚ್.ಆಂಜನೇಯನವರು, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಸನಗೌಡ ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.
1992ರಲ್ಲಿ ಕರಸೇವಕರಾಗಿ ಶ್ರೀ ರಾಮ ದೇವರ ಸೇವೆ ಮಾಡಿದ ಭಕ್ತರಿಗೆ, ಕಾರ್ಯಕರ್ತರಿಗೆ ಈಗ ನೋಟೀಸ್ ನೀಡಿ ಹುಬ್ಬಳ್ಳಿ ಪೊಲೀಸರು ಬಂಧನ ಮಾಡುವುದಾಗಿ ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಸೇಡಿನ ರಾಜಕಾರಣ ತೋರಿಸುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರನ್ನು ವಿ.ಐ.ಪಿ ಪ್ರಕರಣಗಳ ಹುಡುಕಾಟಕ್ಕೆ ನಿಯೋಜಿಸಿರುವ ಗೃಹ ಇಲಾಖೆಯ ಕ್ರಮ ಖಂಡನೀಯ ಎಂದು ಆಕ್ಷೇಪಿಸಿದ್ದಾರೆ.