ಗದಗ : ಗದಗ ಜಿಲ್ಲೆಯಲ್ಲಿ ಮಾ.08 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಹೇಳಿದರು. ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನ ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20227 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 4719 ಪ್ರಕರಣಗಳಿವೆ ಎಂದರು.
ಇನ್ನೂ ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಉಪಸ್ಥಿತರಿದ್ದರು.