ಬೆಂಗಳೂರು: ರತನ್ ಟಾಟಾ ಅವರದ್ದು ಸಮಗ್ರ ವ್ಯಕ್ತಿತ್ವ, ನಾನು ಅವರ ಮನೆಯಿಂದ ಮಾತ್ರ ಪರೋಪಕಾರವನ್ನು ಕಲಿಯುತ್ತೇನೆ. ಅವರ ನಿಧನ ನನಗೆ ವೈಯಕ್ತಿಕ ನಷ್ಟ ಎಂದು ಲೇಖಕಿ ಹಾಗೂ ಸಂಸದೆ ಸುಧಾ ಮೂರ್ತಿಯವರು ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರತನ್ ಟಾಟಾ ಅವರನ್ನು ಭೇಟಿಯಾಗಿದ್ದೆ. ಅವರು ಪ್ರಾಮಾಣಿಕತೆ, ಸರಳತೆ, ಯಾವಾಗಲೂ ಇತರರ ಕಾಳಜಿ ವಹಿಸುವ ಮತ್ತು ಸಹಾನುಭೂತಿ ಹೊಂದಿರುವ ವ್ಯಕ್ತಿಯಾಗಿದ್ದರು. ಅಪಾರ ತಾಳ್ಮೆ, ಅಪರೂಪದ ವ್ಯಕ್ತಿತ್ವದ ಮೂಲಕ ಅವರು ದಂತಕಥೆಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಈ ಹಿಂದೆ ರತನ್ ಟಾಟಾ (Ratan Tata), ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್(KT Thomas) ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ(Kariya Munda) ಅವರನ್ನು ಪಿಎಂ-ಕೇರ್ಸ್ ಫಂಡ್(PM CARES Fund ) ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿತ್ತು. ಇದೇ ವೇಳೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್(Infosys) ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ(Sudha Murthy) ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿತ್ತು.
ಉದ್ಯಮಿಯಾಗಿ ಸಾರ್ಥಕ ಬದುಕು ನಡೆಸಿದ ರತನ್ ಟಾಟಾ (Ratan Tata) ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಹೇಳಿದ್ದಾರೆ.
ಅನಾರೋಗ್ಯ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.