ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ
T20 World Cup: ಇಂದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ- ಅಮೆರಿಕ ಮುಖಾಮುಖಿ..!
ಹೈದರಾಬಾದ್ನಿಂದ ಬೆಂಗಳೂರಿಗೆ ಬಂದು ರೇವ್ ಪಾರ್ಟಿ (Rave Party) ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್ 12) ಹೇಮಾಗೆ ಜಾಮೀನು (Bail) ಮಂಜೂರು ಮಾಡಲಾಗಿದೆ
ಬೆಂಗಳೂರು ಗ್ರಾಮಾಂತರ ಎನ್ಡಿಪಿಎಸ್ ವಿಶೇಷ ಕೋರ್ಟ್ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.