ಮತ್ತೊಂದು ಹೊಸ ತನದ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ (Santhosh Kodenkeri) ನಿರ್ದೇಶನದ ರವಿಕೆ ಪ್ರಸಂಗ (Ravike Prasanga) ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು (Release) ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.
ದೃಷ್ಟಿ ಮೀಡಿಯಾ’ ಪ್ರೊಡಕ್ಷನ್ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ (Geeta Bharati Bhatt) ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ.