ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ವಾಯುಪಡೆಯ ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ವರದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಕೈ ಸೇರಲಿದೆ. ದುರಂತ ನಡೆದ ದಿನದಿಂದಲೇ ಆರಂಭವಾಗಿದ್ದ ತನಿಖೆ ಒಂದು ತಿಂಗಳ ನಂತರ ಪೂರ್ಣಗೊಂಡಿದೆ.
ದುರಂತ ಘಟನೆಗೆ ಕಾರಣವಾಗಿರಬಹುದಾದ ಎಲ್ಲ ಸನ್ನಿವೇಶಗಳನ್ನು ತನಿಖಾ ತಂಡವು ವಿಶ್ಲೇಷಿಸಿದೆ ಎನ್ನಲಾಗುತ್ತಿದೆ. ತಮಿಳುನಾಡಿನ ಕೂನೂರಿನಲ್ಲಿ ನಡೆದ ವಾಯುಪಡೆಯ ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಗಳು ಪೂರ್ಣಗೊಳಿಸಿದ್ದು, ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವರದಿಯನ್ನು ಒಪ್ಪಿಸಲಿದ್ದಾರೆ.
