ಸ್ಟಾರ್ ಆಲ್ರೌಂಡರ್ಗಳನ್ನು ಕೈಬಿಟ್ಟಿರುವ ಆರ್ಸಿಬಿಗೆ ಹಿನ್ನಡೆ ಆಗಬಹುದು ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಡಿಸೆಂಬರ್ 19 ರಂದು ನಡೆಯಲಿರುವ 2024ರ ಐಪಿಎಲ್ ಮಿನಿ ಹರಾಜಿನ ಹಿನ್ನೆಲೆಯಲ್ಲಿ ನಮ್ಮ ಆರ್ಸಿಬಿ ತಂಡ ಪ್ರಮುಖ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್, ಇದು ಆರ್ಸಿಬಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದಿದ್ದಾರೆ.
ಹರ್ಷಲ್ ಪಟೇಲ್ ಹಾಗೂ ವನಿಂದು ಹಸರಂಗ ಅವರನ್ನು ಬಿಡುಗಡೆಗೊಳಿಸಿದದ್ದು, ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರ್ಸಿಬಿ 2022ರ ಮೆಗಾ ಹರಾಜಿನಲ್ಲಿ 10.75 ಕೋಟಿ ಖರ್ಚು ಮಾಡಿ ಹರ್ಷಲ್ ಪಟೇಲ್ ಹಾಗೂ ವನಿಂದು ಹಸರಂಗ ಅವರನ್ನು ಖರೀದಿಸಿತ್ತು. ಹಸರಂಗ 26 ವಿಕೆಟ್ ಪಡೆದು ಉತ್ತಮ ಪ್ರದರ್ಶನ ತೋರಿದರು. 2021ರಲ್ಲಿ ಅಮೋಘ ಬೌಲಿಂಗ್ ಮೂಲಕ ಗಮನ ಸೆಳೆದಿದ್ದ ಪರ್ಪಲ್ ಪಟೇಲ್ ಕಳೆದೆರೆಡು ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ್ದರು. ಹಾಗಾಗಿ ಇವರನ್ನು 2024ರ ಐಪಿಎಲ್ ಗೂ ಮುನ್ನಾ ಮಿನಿ ಹರಾಜಿನಲ್ಲಿ ಆರ್ಸಿಬಿ ತಂಡದಿಂದ ಬಿಡುಗಡೆಗೊಳಿಸಿದೆ.
ತಂಡದ ಪರ್ಸ್ ಮೊತ್ತ ಹೆಚ್ಚಿಸುವ ಸಲುವಾಗಿ ಈ ಆಟಗಾರರನ್ನು ಬಿಡುಗಡೆ ಮಾಡಿದ್ದು ಉತ್ತಮ ನಿರ್ಧಾರ ಆಗಿದ್ದರೂ ತಂಡಕ್ಕೆ ಹಿನ್ನಡೆ ಆಗಿದೆ. ನೂತನ ಹೆಡ್ ಕೋಚ್ ಆಂಡಿ ಫ್ಲವರ್ ಅವರು ಜಾಣರಾಗಿದ್ದು, ಈ ಆಟಗಾರರ ಸ್ಥಾನವನ್ನು ಸಮರ್ಥವಾಗಿ ತುಂಬುವ ಆಟಗಾರರನ್ನು ಮಿನಿ ಹರಾಜಿನಲ್ಲಿ ಖರೀದಿಸುವ ಭರವಸೆ ಇದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹೇಳಿದ್ದಾರೆ.